SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಕನ್ನಡದ ಹಿರಿಯ ನಟಿ ಪದ್ಮಾದೇವಿ ನಿಧನ


19 Padmadevi_in_Kisan_Kanyaಬೆಂಗಳೂರು: ಕನ್ನಡದಲ್ಲಿ ಸೆಟ್ಟೇರಿದ ಮೊದಲ ವಾಕ್ಚಿತ್ರ `ಭಕ್ತಧ್ರುವ’ (1934)ದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟಿದ್ದ ಎಸ್. ಕೆ. ಪದ್ಮಾದೇವಿ 2019 ಸೆಪ್ಟೆಂಬರ್ 19ರ ಗುರುವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

‘ಸಂಸಾರನೌಕೆ’ (1936) ಪದ್ಮಾದೇವಿಗೆ ಹೆಸರು ತಂದು ಕೊಟ್ಟ ಚಿತ್ರ. ಈ ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಹಾಡಿದ್ದರು. ಒಂದು ಹಾಡನ್ನು ಸ್ವತಃ ಇವರೇ ವೀಣೆ ನುಡಿಸಿಕೊಂಡು ಹಾಡಿದ್ದು ವಿಶೇಷ.

‘ವಸಂತಸೇನ’, ‘ಭಕ್ತ ಸುಧಾಮ’, ‘ಜಾತಕ ಫಲ’ ಚಿತ್ರಗಳಲ್ಲಿಯೂ ನಟಿಸಿದರು. ‘ಭಕ್ತಸುಧಾಮ’ದಲ್ಲಿ ಮಧುಗಿರಿ ಮೀನಾಕ್ಷಿ ಎಂದು ಹೆಸರು ಬದಲಾಯಿಸಿಕೊಂಡರು. ಎರಡು ತೆಲುಗು ಚಿತ್ರಗಳಲ್ಲಿಯೂ ಅಭಿನಯಿಸಿದ್ದರು.

‘ಮುಕ್ತಿ’, ‘ಅಮರ ಮಧುರ ಪ್ರೇಮ’, ‘ಸಂಕ್ರಾಂತಿ ಚಿತ್ರಗಳಲ್ಲಿ ಅಭಿನಯಿಸಿದ್ದರು. ಆಕಾಶವಾಣಿಯಲ್ಲಿ ಅನೇಕ ವರ್ಷಗಳು ಕೆಲಸ ಮಾಡಿದ ಪದ್ಮಾದೇವಿಯವರು ಆ ಮಾಧ್ಯಮದಲ್ಲಿ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದರು.

ಮೂಲತಹ ಬೆಂಗಳೂರಿನವರಾದ ಪದ್ಮಾದೇವಿ ಅವರು ಬಳ್ಳಾರಿ ರಾಘವಾಚಾರ್ಯರ ಮೂಲಕ ರಂಗಭೂಮಿ ಪ್ರವೇಶಿಸಿದವರು. ಹೆಚ್.ಎಲ್.ಎನ್.ಸಿಂಹ ಅವರ ನಾಟಕ ಕಂಪೆನಿಯಲ್ಲಿ ನಟಿಯಾಗಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ಸ್ವಂತ ನಾಟಕ ಸಂಸ್ಥೆಯನ್ನು ಕಟ್ಟಿದರು. ಸಿನಿಮಾ ಕ್ಷೇತ್ರಕ್ಕಿಂತ ರಂಗಭೂಮಿಯಲ್ಲಿ ಹೆಚ್ಚು ಸಕ್ರಿಯರಾಗಿದ್ದರು.

ಪದ್ಮಾದೇವಿ ಅವರ ಮೊಮ್ಮಗ ಸಿಂಗಪುರದಲ್ಲಿ ನೆಲೆಸಿದ್ದು, ಅವರು ಬಂದ ಬಳಿಕ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರು ತೀರ್ಮಾನಿಸಿದ್ದಾರೆ. ಬುಧವಾರ ರಾತ್ರಿಯಷ್ಟೇ ಪದ್ಮಾದೇವಿ ವಿಡಿಯೊ ಕಾಲ್‌ನಲ್ಲಿ ಮೊಮ್ಮಗನೊಂದಿಗೆ ಮಾತನಾಡಿದ್ದರು.

September 19, 2019 - Posted by | ಕರ್ನಾಟಕ, ರಾಜ್ಯ, Cinema, Entertrainment, Flash News, General Knowledge, News, Spardha | ,

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ