SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಡಿಕೆಶಿ ಜತೆ ಹಣಕಾಸು ವ್ಯವಹಾರ: ಲಕ್ಷ್ಮೀ ಹೆಬ್ಬಾಳ್ಕರ್ ಗೆ ಇಡಿ ಗ್ರಿಲ್


20 Laxmi Hebbalkar
ನವದೆಹಲಿ
: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು  ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019 ಸೆಪ್ಟೆಂಬರ್  20ರ ಶುಕ್ರವಾರ ಮಧ್ಯಾಹ್ನ 12ಗಂಟೆಯಿಂದ ಸತತವಾಗಿ ವಿಚಾರಣೆಗೊಳಪಡಿಸಿರುವುದಾಗಿ ಮಾಧ್ಯಮ  ವರದಿ ತಿಳಿಸಿತು.

ದೆಹಲಿಯ ಲೋಕನಾಯಕ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಬೆಳಗಾವಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಡಿಕೆಶಿ ನಡುವಿನ ಹಣ ವರ್ಗಾವಣೆ ಕುರಿತು ತನಿಖೆ ನಡೆಯಿತು  ಎಂದು ವರದಿ ಹೇಳಿತು.

ಮತ್ತೊಂದೆಡೆ ನ್ಯಾಯಾಂಗ ಬಂಧನದಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತಂತೆ ವಿಚಾರಣೆ 2019 ಸೆಪ್ಟೆಂಬರ್  21ರ ಶನಿವಾರ ಬೆಳಗ್ಗೆ 11ಗಂಟೆಗೆ ನಡೆಯಲಿದೆ.

ನನಗೆ ಡಿಕೆ ಶಿವಕುಮಾರ್ ಅವರ ಜತೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.

September 20, 2019 - Posted by | ಆರ್ಥಿಕ, ಕರ್ನಾಟಕ, ರಾಜ್ಯ, ರಾಷ್ಟ್ರೀಯ, Bengaluru, Bangalore,, Finance, Flash News, India, Nation, News, Politics, Spardha | , , ,

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ