SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಮಹಾರಾಷ್ಟ್ರ ಬ್ಯಾಂಕ್ ಹಗರಣ: ಶರದ್ ಪವಾರ್ ಸೋದರಳಿಯ ಅಜಿತ್ ಪವಾರ್ ವಿರುದ್ಧ ಇ.ಡಿ ಕೇಸ್


24 sharad pawar and Ajit pawar
ನವದೆಹಲಿ
: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ (ಎಂಎಸ್ಸಿಬಿ) ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ವಹಿವಾಟು ನಡೆಸಿರುವ ಆರೋಪದ ಮೇಲೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಸೋದರಳಿಯ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ಜಾರಿ ನಿರ್ದೇಶನಾಲಯವು 2019 ಸೆಪ್ಟೆಂಬರ್  24ರ ಮಂಗಳವಾರ ಪ್ರಕರಣ ದಾಖಲಿಸಿತು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಂತೆ ಈ ವಿದ್ಯಮಾನ ಘಟಿಸಿತು.

ಬಾಂಬೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಎಂಎಸ್ಸಿಬಿ ಹಗರಣ ಪ್ರಕರಣ ಸಂಬಂಧ ಕಳೆದ ತಿಂಗಳು ಮುಂಬೈ ಪೊಲೀಸರು ಅಜಿತ್ ಪವಾರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ರೈತರು ಮತ್ತು ಕಾರ್ಯಕರ್ತರು ಪಕ್ಷದ ನಾಯಕ ಜಯಂತ್ ಪಾಟೀಲ್ ಮತ್ತು ರಾಜ್ಯದ ೩೪ ಜಿಲ್ಲೆಗಳ ಸೂಪರ್ ಸೀಡ್ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಹಲವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

೨೦೦೭ ರಿಂದ ೨೦೧೧ರ ನಡುವೆ ನಡೆದ ಎಂಎಸ್ಸಿಬಿ ಹಗರಣದಿಂದ ಸುಮಾರು ಒಂದು ಸಾವಿರ ಕೋಟಿ ನಷ್ಟವಾಗಿದೆ ಎಂದು ಆರೋಪಿಸಲಾಗಿತ್ತು.

ಸಕ್ಕರೆ ಕಾರ್ಖಾನೆಗಳಿಗೆ ಮತ್ತು ಬೇಕಾಬಿಟ್ಟಿಯಾಗಿ ನಿಯಮಗಳನ್ನು ಗಾಳಿಗೆ ತೂರಿ ಸಾಲ ಹಂಚಿಕೆ ಮಾಡಲಾಗಿದೆ ಮತ್ತು ಆರ್ಥಿಕವಾಗಿ ದುರ್ಬಲರಾಗಿದ್ದವರಿಗೂ ಸಾಲ ಮಂಜೂರು ಮಾಡಲಾಗಿದೆ. ಹಲವು ಪ್ರಕರಣಗಳಲ್ಲಿ ಯಾವುದೇ ಆಧಾರಗಳು ಇಲ್ಲದೇ ಸಾಲವನ್ನು ಮಂಜೂರು ಮಾಡಲಾಗಿದೆ. ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಕೆಲವು ರಾಜಕಾರಣಿಗಳ ನಿಕಟ ಸಂಬಂಧಿಗಳಿಗೆ ಮಾರಾಟ ಮಾಡಲಾಗಿದೆ ಎಂಬುದು ಈ ಹಗರಣದ ಪ್ರಮುಖ ಆರೋಪಗಳಾಗಿವೆ.

September 24, 2019 - Posted by | ಆರ್ಥಿಕ, ರಾಷ್ಟ್ರೀಯ, ವಿಶ್ವ/ ಜಗತ್ತು, Finance, Flash News, General Knowledge, India, Nation, News, Politics, Spardha | , , ,

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ